ಬೆಂಗಳೂರು: ರೇಷನ್ ಕಾರ್ಡ್ ರದ್ದು ಮಾಡುವ ವಿಚಾರ ರಾಜ್ಯದಲ್ಲಿ ದೊಡ್ಡ ಕೋಲಾಹಲವನ್ನೇ ಸೃಷ್ಟಿಸಿದ್ದು, ಈಗ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಕಾರ್ಡ್ ರದ್ದು ಮಾಡದಂತೆ ಸೂಚಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ಕೂಡಲೇ ಮರಳಿ ನೀಡುವಂತೆ ಆದೇಶ ಹೊರಡಿಸಿದ್ದಾರೆ.
ಆದರೆ, ಒಂದು ವೇಳೆ ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ವರಿಕೆ ನೀಡಿದ್ದಾರೆ. ಅಲ್ಲದೇ, ಇಲ್ಲಿಯವರೆಗೆ ರದ್ದಾಗಿರುವ ಕಾರ್ಡ್ ಗಳನ್ನು ಸಂಬಂಧಪಟ್ಟವರಿಗೆ ಮರಳಿಸುವಂತೆ ಸೂಚಿಸಿದ್ದಾರೆ.