ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramiah) ನೇತೃತ್ವದಲ್ಲಿ ಗುರುವಾರ ಸಚಿವ ಸಂಪುಟ ಸಭೆ (Cabinet Meeting) ನಡೆದಿದ್ದು, ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದ ವಿಷಯ ಕೂಡ ಚರ್ಚೆಯಾಯಿತು. ಈ ವೇಳೆ ಸಿಎಂ, ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪರವಾಗಿ ನಿಲ್ಲಬೇಕು ಎಂದು ಸೂಚಿಸಿದ್ದಾರೆ. ಅಲ್ಲದೇ, ಮುತ್ತಿಗೆ ಹಾಕಲು ಬಂದರೆ ಅರೆಸ್ಟ್ ಮಾಡುವಂತೆ ಪೊಲೀಸರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಪ್ರಿಯಾಂಕ್ ಖರ್ಗೆ ಯಾವುದೇ ತಪ್ಪು ಮಾಡಿಲ್ಲ. ಬಿಜೆಪಿ ರಾಜಕಾರಣಕ್ಕಾಗಿ ಈ ರೀತಿ ಆರೋಪ ಮಾಡುತ್ತಿದೆ. ಎಲ್ಲ ಸಚಿವರು ಗಟ್ಟಿಯಾಗಿ ಕೌಂಟರ್ ಕೊಡಬೇಕು ಎಂದಿದ್ದಾರೆ.
ಅಲ್ಲದೇ, ಬಿಜೆಪಿ ನಾಯಕರ ವಿರುದ್ದ ಇರುವ ಕೇಸ್ ಗಳ ದಾಖಲೆಗಳ ವಿವರವನ್ನು ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯ ಎಲ್ಲಾ ಸಚಿವರಿಗೆ ನೀಡಿದರು. ಯಡಿಯೂರಪ್ಪ, ಪ್ರಹ್ಲಾದ್ ಜೋಶಿ ಸೇರಿದಂತೆ ನಾಯಕರುಗಳ ರಾಜೀನಾಮೆ ಯಾವಾಗ ಎಂದು ನೀವು ಮರು ಪ್ರಶ್ನೆ ಮಾಡಿ ಎಂದು ಸಲಹೆ ನೀಡಿದ್ದಾರೆ.