ನಿನ್ನೆ ಸಿಎಂ ಸಿದ್ಧರಾಮಯ್ಯರ ಆರೋಗ್ಯ ವಿಚಾರಿಸುವ ನೆಪದಲ್ಲಿ ಅವರ ಸರ್ಕಾರಿ ನಿವಾಸಕ್ಕೆ ಭೇಟಿ ಕೊಟ್ಟಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮುಂದೆ ಹನಿಟ್ರ್ಯಾಪ್‌ನ ಇಂಚಿಂಚೂ ಮಾಹಿತಿಯನ್ನು ಸಿದ್ಧರಾಮಯ್ಯ ಬಿಚ್ಚಿಟ್ಟಿದ್ದಾರೆ.
ಸುಮಾರು ಒಂದು ಘಂಟೆಗಳ ಕಾಲ ಉಭಯ ನಾಯಕರ ಮಧ್ಯೆ ಚರ್ಚೆಯಾಗಿದ್ದು, ಹನಿಟ್ರ್ಯಾಪ್ ಪ್ರಕರಣದ ಎಲ್ಲಾ ಮಾಹಿತಿಯನ್ನು ಖರ್ಗೆ ಅವರಿಗೆ ಸಿಎಂ ಸಿದ್ಧರಾಮಯ್ಯ ನೀಡಿದ್ದಾರೆ.