ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ (Scheduled caste) ಉದ್ಯೋಗದ ವೇಳೆ ಒಳಮೀಸಲಾತಿ (internal reservation) ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಸಚಿವರ ಸಭೆ ನಡೆಯುತ್ತಿದೆ.
ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸಭೆ ನಡೆಯಲಿದೆ. ಸಚಿವ ಸಂಪುಟ (cabinet) ಪ್ರಮುಖರು ಭಾಗಿಯಾಗಲಿದ್ದಾರೆ. ಇತ್ತೀಚೆಗೆ ಈ ಒಳಮೀಸಲಿನ ಕೂಗು ಹೆಚ್ಚಾಗಿರುವುದರಿಂದಾಗಿ ಈ ಸಭೆ ನಡೆಯುತ್ತಿದೆ.
ಸುಪ್ರೀಂಕೋರ್ಟ್ ಕೂಡ ತೀರ್ಪು ನೀಡಿದೆ. ನಾವು ಜಾರಿ ಮಾಡಲೇಬೇಕಿದೆ. 101 ಪರಿಶಿಷ್ಟ ಜಾತಿಗಳಿವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅತಿ ಅವಶ್ಯವಾಗಿದೆ. ಸಂಪೂರ್ಣ ಸಮಾಧಾನ ಮಾಡದಿದ್ದರೂ ಶೇ. 90ರಷ್ಟು ತೃಪ್ತಿ ಪಡಿಸಲಾಗುವುದು ಎಂದು ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈಗ ಈ ಕುರಿತು ಮಹತ್ವದ ಸಭೆ ನಡೆಸಲು ತೀರ್ಮಾನಿಸಿದ್ದಾರೆ.