ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ವಿಧಾನ ಸೌಧದ ಸಮ್ಮೇಳನದ ಸಭಾಂಗಣದಲ್ಲಿ ದಲಿತ ಸಂಘಟನೆಗಳು ಹಾಗೂ ದಲಿತ ಸಮುದಾಯದ ಮುಖಂಡರುಗಳೊಂದಿಗೆ ಸಭೆ ನಡೆಸಿದರು.
ಈ ಸಂದರ್ಭದಲ್ಲೇ 2025-26ನೇ ಸಾಲಿನ ಆಯವ್ಯಯ ಕುರಿತು ಪೂರ್ವಭಾವಿ ಸಭೆ ನಡೆಸಿದರು. ಈ ಸಭೆಯಲ್ಲಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಚಿವ ಕೆ.ಹೆಚ್.ಮುನಿಯಪ್ಪ, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಯರೆಡ್ಡಿ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು, ದಲಿತ ಸಂಘಟನೆಗಳ ಹಾಗೂ ದಲಿತ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.