ಬೆಂಗಳೂರು: ಆಡಳಿತ ಹಾಗೂ ವಿರೋಧ ಪಕ್ಷಗಳ ಮಧ್ಯೆ ಹನಿಟ್ರ್ಯಾಪ್ ಫೈಟ್ ನಡೆಯುತ್ತಿದೆ. ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹಾಗೂ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದು, ತೀವ್ರ ಕುತಹೂಲಕ್ಕೆ ಕಾರಣವಾಗಿದೆ.
ಸಿಎಂ ಅವರ ಅಧಿಕೃತ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ, ಈ ಸಂದರ್ಭದಲ್ಲಿ 1 ಗಂಟೆಗೂ ಹೆಚ್ಚುಕಾಲ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕೂಡ ಇದ್ದರು.