ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸ ‘ಕಾವೇರಿ’ಯಲ್ಲಿ ಗುರುವಾರ ನಡೆದ ಮಹತ್ವದ ಬ್ರೇಕ್‌ಫಾಸ್ಟ್ ಸಭೆಯಲ್ಲಿ ಭಾವನಾತ್ಮಕ ವಾತಾವರಣ ನಿರ್ಮಾಣವಾಗಿದ್ದು, ಸಿಎಂ ಸಿದ್ದರಾಮಯ್ಯ ಕಣ್ಣೀರಿಟ್ಟಿದ್ದಾರೆ.
ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮತ್ತು ಮುಂದಿನ ಎರಡು ವರ್ಷಗಳ ಕಾಲ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಪ್ರಕಟಿಸುವ ವೇಳೆ ಸಿದ್ದರಾಮಯ್ಯ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.
ಈ ಸಂದರ್ಭ ಸಿದ್ದರಾಮಯ್ಯ ಅವರು ತಮ್ಮ ಆಡಳಿತಾವಧಿಯಲ್ಲಿ ನೀಡಿದ ಜನಪರ ಯೋಜನೆಗಳು ಮತ್ತು ಉತ್ತಮ ಕಾರ್ಯಗಳನ್ನು ಸ್ಮರಿಸಿದ್ದು, ಮುಂಬರುವ ದಿನಗಳಲ್ಲಿ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಂಪೂರ್ಣ ಸಹಕಾರ ನೀಡಿ. ಜನಪರ ಆಡಳಿತವನ್ನು ಮುಂದುವರಿಸಿ ಎಂದು ತಮ್ಮ ಸಚಿವ ಸಂಪುಟದ ಸದಸ್ಯರಿಗೆ ಕರೆ ನೀಡಿದ್ದಾರೆ. ಅಲ್ಲದೆ, ಬಿಜೆಪಿಯ ರಾಜಕಾರಣದ ಬಗ್ಗೆ ಎಚ್ಚರಿಕೆ ವಹಿಸುವಂತೆಯೂ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಅಂದು, ಇಂದು, ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ ವೈರಲ್!



















