ಬೆಂಗಳೂರು : ಒಳ ಮೀಸಲಾತಿ ಗೊಂದಲ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಹಿರಿಯ ಸಚಿವರಿಗಾಗಿ ಸೋಮವಾರ (ಮಾ.16) ಔತಣಕೂಟ ಏರ್ಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಕೆ.ಎಚ್.ಮುನಿಯಪ್ಪ, ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಬೈರತಿ ಸುರೇಶ್, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಸೇರಿ ಸುಮಾರು 15 ಸಚಿವರನ್ನು ಔತಣ ಕೂಟಕ್ಕೆ ಆಹ್ವಾನಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಪರಿಶಿಷ್ಟ ಜಾತಿಯ ಒಳಮೀಸಲಾತಿ ಗೊಂದಲದ ಹಿನ್ನೆಲೆಯಲ್ಲಿ ಔತಣಕೂಟದ ರೂಪದಲ್ಲಿ ಸಭೆ ಆಯೋಜಿಸಲಾಗಿದ್ದು, ಪ್ರಮುಖ ಸಚಿವರಿಂದ ಮುಖ್ಯಮಂತ್ರಿ ಅವರು ಗೊಂದಲ ನಿವಾರಣೆ ಕುರಿತು ಅಭಿಪ್ರಾಯ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ : ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ!


















