ಬೆಳಗಾವಿ : ಉದ್ಧಟತನ ಹೇಳಿಕೆ ನೀಡಿರುವ ಶಿವಸೇನೆಯ ನಾಯಕನಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಶಿವಸೇನೆಯ ನಾಯಕ ಆದಿತ್ಯ ಠಾಕ್ರೆ ಬೆಳಗಾವಿ ವಿಷಯದಲ್ಲಿ ಉದ್ಧಟತನ ಹೇಳಿಕೆ ನೀಡಿದ್ದ. ಹೀಗಾಗಿ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆದಿತ್ಯ ಠಾಕ್ರೆ ಗೆಲುವು ಸಾಧಿಸಿತ್ತ. ನಂತರ ಪ್ರಚಾರ ಪಡೆಯುವುದಕ್ಕಾಗಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಗೆ ಪತ್ರ ಬರೆದು, ಬೆಳಗಾವಿ ಮತ್ತು ಕಾರವಾರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸುವ ನಿರ್ಣಯವನ್ನು ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು. ಈ ವಿಚಾರವಾಗಿ ಸಿಎಂ ಕೆಂಡಾಮಂಡಲವಾಗಿದ್ದಾರೆ.
ಈ ಹೇಳಿಕೆ ಬಾಲಿಶತನದಿಂದ ಕೂಡಿದೆ. ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು “ಎಂದು ಹೇಳಿದ್ದಾರೆ. ಯಾರೇ ಪುಂಡಾಟಿಕೆ ಮಾಡಿದರೂ ಸುಮ್ಮನಿರಲ್ಲ ಎಂದು ವಾರ್ನಿಂಗ್ ಕೊಟ್ಟಿದ್ದಾರೆ.