ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಗಾದರೂ ಮಾಡಿ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಪಡೆಯಬೇಕೆಂದು ವಿಪಕ್ಷಗಳು ಪಟ್ಟು ಹಿಡಿದಿವೆ. ಇನ್ನೊಂದೆಡೆ ಅವರದೇ ಪಕ್ಷದ ನಾಯಕರು ಕುರ್ಚಿಯ ಮೇಲೆ ಕಣ್ಣಿಟ್ಟಿದ್ದಾರೆ. ಈ ವೇಳೆ ಮತ್ತಷ್ಟು ದಾಖಲೆಗಳನ್ನು ತೆಗೆಯಲು ವಿರೋಧಿಗಳು ಹವಣಿಸುತ್ತಿದ್ದಾರೆ. ಇವುಗಳ ಮದ್ಯೆ ಸಿಎಂ ಸಿಎಂ ಹಾಗೂ ರಾಜ್ಯಪಾಲರು ಮುಖಾಮುಖಿ ಭೇಟಿಯಾಗಿದ್ದಾರೆ.
ಬೆಂಗಳೂರಿಗೆ ಮಾಲ್ಡೀವ್ಸ್ ಅಧ್ಯಕ್ಷರ ಭೇಟಿ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಔತಣಕೂಟ ಆಯೋಜಿಸಲಾಗಿತ್ತು. ಹೀಗಾಗಿ ರಾಜ್ಯಪಾಲರ ಆಹ್ವಾನದ ಮೇರೆಗೆ ರಾಜಭವನಕ್ಕೆ ಸಿಎಂ ಭೇಟಿ ನೀಡಿದ್ದಾರೆ. ಈ ವೇಳೆ ಇಬ್ಬರೂ ನುಗಮುಖದಿಂದ ಕೈಕುಲುಕಿ ಕುಶಲೋಪರಿ ವಿಚಾರಿಸಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಇತ್ತೀಚೆಗೆ ಅನುಮತಿ ನೀಡಿದ್ದರು. ಇದು ರಾಜಕೀಯ ವಲಯದಲ್ಲಿ ದೊಡ್ಡ ಸಂಚಲನಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ನಾಯಕರು ರಾಜ್ಯಪಾಲರ ವಿರುದ್ಧ ಕಿಡಿಕಾರಿದ್ದರು. ಇದನ್ನೇ ಟಾರ್ಗೆಟ್ ಮಾಡಿಕೊಂಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಅಸ್ತ್ರವಾಗಿ ಬಳಕೆ ಮಾಡಿದೆ.
ಈಗ ಸಿಎಂ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿತ್ತು. ಕೋರ್ಟ್ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಹೀಗಾಗಿ ವಿಪಕ್ಷಗಳು ರಾಜೀನಾಮೆಗೆ ಪಟ್ಟು ಹಿಡಿಯುತ್ತಿದ್ದರೆ, ತಮ್ಮದೇ ಪಕ್ಷದ ಹಲವರು ಕುರ್ಚಿಯ ಮೇಲೆ ಕಣ್ಣಿಟ್ಟಿದ್ದಾರೆ.