ಬೆಂಗಳೂರು: ಕಾಶ್ಮೀರದಲ್ಲಿ ನಡೆದ ಘಟನೆಯ ನಂತರ ಪಾಕಿಸ್ತಾನ (Pakistan)ದ ವಿರುದ್ಧ ಭಾರತ ಕೆಂಡಾಮಂಡಲವಾಗಿದೆ. ಪಾಕ್ ವಿರುದ್ಧ ಯುದ್ಧ ಬೇಕೇಬೇಕು ಎಂದು ಹಲವರು ಪಟ್ಟು ಹಿಡಿಯುತ್ತಿದ್ದಾರೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ(CM Siddaramaiah) ಯುದ್ಧ ಬೇಡ ಅಂದಿದ್ದರು. ಈ ವಿಷಯ ಈಗ ಪಾಕ್ ಮಾಧ್ಯಮಗಳಲ್ಲೂ ಪ್ರಸಾರವಾಗುತ್ತಿದೆ ಎನ್ನಲಾಗಿದೆ.
ಈ ಕುರಿತು ವಿರೋಧ ಪಕ್ಷದ ವಿಪಕ್ಷ ನಾಯಕ ಆರ್. ಅಶೋಕ್
(R Ashok) ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಪೋಸ್ಟ್ ಮಾಡಿ ಸಿಎಂ”ಪಾಕಿಸ್ತಾನ ರತ್ನ” ಎಂದು ಕಿಡಿಕಾರಿದ್ದಾರೆ. ಪೋಸ್ಟ್ ನಲ್ಲಿ “ಪಾಕಿಸ್ತಾನ ರತ್ನ” ಸಿಎಂ. ಸಿದ್ದರಾಮಯ್ಯನವರೇ, ತಮ್ಮ ಬಾಲಿಶ, ಅಸಂಬದ್ಧ ಹೇಳಿಕೆಗಳಿಂದ ಈಗ ರಾತ್ರೋರಾತ್ರಿ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್ ಆಗಿಬಿಟ್ಟಿದ್ದೀರಿ. ತಮಗೆ ಅಭಿನಂದನೆಗಳು. ಮುಂದೆಂದಾದರೂ ತಾವು ಪಾಕಿಸ್ತಾನಕ್ಕೆ ಭೇಟಿ ಕೊಟ್ಟರೆ ತಮಗೆ ರಾಜಾತಿಥ್ಯ ಗ್ಯಾರೆಂಟಿ. ಪಾಕಿಸ್ತಾನದ ಪರ ವಕಾಲತ್ತು ವಹಿಸಿದ ಮಹಾನ್ ಶಾಂತಿದೂತ ಎಂದು ಪಾಕಿಸ್ತಾನ ಸರ್ಕಾರ ತಮಗೆ ಅಲ್ಲಿನ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ನಿಶಾನ್-ಎ-ಪಾಕಿಸ್ತಾನ ಪ್ರಶಸ್ತಿ ಕೊಟ್ಟು ಸನ್ಮಾನ ಮಾಡಿದರೂ ಅಚ್ಚರಿಯಿಲ್ಲ. ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿ ಎದುರಿಸುತ್ತಿರುವಾಗ, ಗಡಿಯಲ್ಲಿ ಯುದ್ಧದ ಕಾರ್ಮೋಡ ಕವಿದಿರುವಾಗ ಈ ರೀತಿ ಶತ್ರುರಾಷ್ಟ್ರದ ಕೈಗೊಂಬೆಯಂತೆ ವರ್ತಿಸುತ್ತದ್ದೀರಲ್ಲ, ನಿಮ್ಮಂತಹವರು ಸಾರ್ವಜನಿಕ ಬದುಕಿನಲ್ಲಿ ಇರುವುದೇ ನಮ್ಮ ದೇಶದ ಅತ್ಯಂತ ದೊಡ್ಡ ದುರಂತ ಎಂದು ಬರೆದುಕೊಂಡಿದ್ದಾರೆ.


















