ಬೆಂಗಳೂರು: ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಹಿನ್ನೆಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಪ್ರಯುಕ್ತ ಸಿಎಂ ಸಿದ್ದರಾಮಯ್ಯ ಇಂದು ಆಡುಗೋಡಿಯ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ಈ ವೇಳೆ ಸಿಎಂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಶಾಲಾ ಕೊಠಡಿಗಳ ಪರಿಶೀಲನೆ ನಡೆಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮತ್ತು ಇತರ ಹಿರಿಯ ಸಚಿವರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.