ಬೆಂಗಳೂರು : ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 28 ರಿಂದ ಮೂರು ದಿನಗಳ ಕಾಲ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.
ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಇಂದು ಸಿಎಂ ಜೊತೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಸಿಎಂ ಭಾಗವಹಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.
ಫೆ. 28 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಪಿ ಉತ್ಸವ ಉದ್ಘಾಟನೆ ಮಾಡಲಿದ್ದು, ಮಾರ್ಚ್ 1 ಮತ್ತು 2 ರಂದು ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಮಾರ್ಚ್ 2 ರಂದು ಸಮಾರೋಪ ಸಮಾರಂಭ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಭಾಗವಹಿಸುವುದಾಗಿ ಹೇಳುತ್ತಿದ್ದಂತೆ ಜಮೀರ್ ಅಹ್ಮದ್ ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ಮಾಹಿತಿ ನೀಡಿದ್ದು, ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಹಿಂದಿನ ವರ್ಷ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಭಾಗವಹಿಸಿದ್ದರು.


















