ಸಿಎಂ ಸಿದ್ದರಾಮಯ್ಯ ಹಾಗೂ ವೈದ್ಯಕೀಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಗೌಡ ಪಾಟೀಲ್ ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಸ್ಪತ್ರೆ ವಾರ್ಡ್ ಗಳಿಗೆ ತೆರಳಿ ಚಿಕಿತ್ಸಾ ಸೌಲಭ್ಯ, ಸಮಸ್ಯೆಗಳ ಬಗ್ಗೆ ರೋಗಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದಿದ್ದಾರೆ. ಆಸ್ಪತ್ರೆಯಲ್ಲಿನ ಚಿಕಿತ್ಸಾ ವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿಗಳ ಕಾರ್ಯವೈಖರಿ ಬಗ್ಗೆ ಮಾಹಿತಿ ಕೇಳಿದ್ದಾರೆ.




















