ಬೆಳಗಾವಿ : ಚಳಿಗಾಲದ ಅಧಿವೇಶನ ನಡುವೆ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ತೀವ್ರ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಸದನಕ್ಕೆ ಗೈರಾಗಿದ್ದ ಸಿಎಂ, ಬೆಳಗಾವಿ ಸರ್ಕೀಟ್ ಹೌಸ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಮಧ್ಯಾಹ್ನದ ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿದೆ. ಹೀಗಾಗಿ ವೈದ್ಯರ ಸಲಹೆಯಂತೆ ಅವರು ಅಧಿವೇಶನಕ್ಕೆ ಹೋಗದೆ ವಿಶ್ರಾಂತಿ ಪಡೆಯುತ್ತಿದ್ದಾರೆ. ಇನ್ನು ಸಂಜೆಯವರೆಗೆ ನಿಗದಿಯಾಗಿದ್ದ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.
ಈ ವಿಷಯ ತಿಳಿಯುತ್ತಿದ್ದಂತೆ ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸರ್ಕೀಟ್ ಹೌಸ್‌ಗೆ ಧಾವಿಸಿ ತಂದೆಯ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ವಿವಿಧ ಪಕ್ಷಗಳ ನಾಯಕರು ಕೂಡ ಸರ್ಕೀಟ್ ಹೌಸ್‌ಗೆ ಭೇಟಿ ನೀಡಿ ಸಿಎಂ ಆರೋಗ್ಯ ವಿಚಾರಿಸಿದ್ದಾರೆ. ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಏಕಾಂಗಿಯಾಗಿ ಬಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿತು.
ಭೇಟಿಯ ಬಳಿಕ ಮಾತನಾಡಿದ ಜಾರಕಿಹೊಳಿ, ‘ಇದು ಕೇವಲ ಸೌಜನ್ಯದ ಭೇಟಿ. ಸಿಎಂ ಅವರಿಗೆ ಧೈರ್ಯ ಹೇಳುವ ಅವಶ್ಯಕತೆಯಿಲ್ಲ, ಅವರೇ ನಮಗೆ ಧೈರ್ಯ ಹೇಳುವಷ್ಟು ಗಟ್ಟಿಯಾಗಿದ್ದಾರೆ. ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ : ಶಿವಮೊಗ್ಗ | ಪತ್ನಿ ಜೊತೆ ಅನೈತಿಕ ಸಂಬಂಧ ಶಂಕೆ.. ತಮ್ಮನನ್ನೇ ಹತ್ಯೆಗೈದು ತೋಟದಲ್ಲಿ ಹೂತುಹಾಕಿದ ಅಣ್ಣ



















