ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಪವರ್ ಫೈಟ್ ಚರ್ಚೆಗಳು ಜೋರಾಗಿರುವ ನಡುವೆಯೇ ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯ ಬಜೆಟ್ ಮಂಡನೆ ಮಾಡಲು ಸಿದ್ಧರಾಗಿದ್ದಾರೆ. ಇದು ಅವರ ರಾಜಕೀಯ ಜೀವನದಲ್ಲಿ ದಾಖಲೆಯ 17ನೇ ಬಜೆಟ್ ಆಗಲಿದೆ.
ಕಳೆದ ಒಂದು ತಿಂಗಳಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸುತ್ತಾ ವಿವಿಧ ಇಲಾಖೆಗಳಿಂದ ಮಾಹಿತಿ ಪಡೆದು ಬಜೆಟ್ ರೂಪುರೇಷೆ ಸಿದ್ಧಪಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಭಾರೀ ಹೊರೆ ನಡುವೆ ರಾಜ್ಯದ ಆರ್ಥಿಕ ಲೆಕ್ಕಾಚಾರವನ್ನು ಸಮತೋಲನಗೊಳಿಸುವುದು ಸಿಎಂಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಯುಗಾದಿ ಹಬ್ಬದ ಮುನ್ನ ರಾಜ್ಯದ ಜನತೆಗೆ ವಿಶೇಷ ಗಿಫ್ಟ್ ನೀಡಲಿದೆಯೇ ಎಂಬ ಕುತೂಹಲವೂ ಹೆಚ್ಚಾಗಿದೆ. ವಿಶೇಷವಾಗಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಇನ್ನಷ್ಟು ಸೌಲಭ್ಯಗಳ ಘೋಷಣೆ ಮಾಡುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಇದೇ ವೇಳೆ ಕೃಷಿ, ಆರೋಗ್ಯ, ಶಿಕ್ಷಣ, ಸಾರಿಗೆ, ಕೈಗಾರಿಕಾ ಮತ್ತು ಸೇವಾ ವಲಯಗಳಿಗೆ ಬಜೆಟ್‌ನಲ್ಲಿ ಯಾವ ರೀತಿಯ ಪ್ರೋತ್ಸಾಹ ಸಿಗಲಿದೆ ಎಂಬುದರತ್ತ ಎಲ್ಲರ ಗಮನ ನೆಟ್ಟಿದೆ. ಸಿಎಂ ಸಿದ್ದರಾಮಯ್ಯ ಅವರ ಬಜೆಟ್ ಗಣಿತದಲ್ಲಿ ಯಾವ ವರ್ಗಕ್ಕೆ ಮತ್ತು ಯಾವ ವಲಯಕ್ಕೆ ಬಂಪರ್ ಸಿಗಲಿದೆ ಎಂಬುದನ್ನು ತಿಳಿಯಲು ರಾಜ್ಯದ ಜನತೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ.
ಇದನ್ನೂ ಓದಿ : KPSC ಮೇಲೆ ಸಾಲು ಸಾಲು ಆರೋಪ | ಒಂದೇ ಕೇಂದ್ರದ 15 ಅಭ್ಯರ್ಥಿಗಳು ಆಯ್ಕೆ



















