ಉಡುಪಿ : ಇಂದು ತಮಿಳುನಾಡು ಸಿಎಂ ವಿಜಯ್ ಅವರು ಉಡುಪಿಯಲ್ಲಿರುವ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು, ಮೂಕಾಂಬಿಕೆ ತಾಯಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ತಮಿಳುನಾಡಿನ ಎಂಜಿಆರ್ ಹಾಗೂ ಜಯಲಲಿತಾ ಭೇಟಿ ಬಳಿಕ ಇದೀಗ ತಮಿಳುನಾಡು ಸಿಎಂ ವಿಜಯ್ ಜೋಸೆಫ್ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆಯಲಿದ್ದಾರೆ. ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆ ವೇಳೆಗೆ ಸಿಎಂ ವಿಜಯ್ ಮೂಕಾಂಬಿಕೆಯ ದರ್ಶನ ಪಡೆಯುವ ಸಾಧ್ಯತೆಯಿದೆ. ತಮಿಳುನಾಡು ಪೊಲೀಸರು ಈಗಾಗಲೇ ಕೊಲ್ಲೂರಿನಲ್ಲಿ ಬೀಡುಬಿಟ್ಟಿದ್ದು, ಆಯಕಟ್ಟಿನ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಸಿಎಂ ವಿಜಯ್ ಭೇಟಿ ಹಿನ್ನೆಲೆ ದೇವಸ್ಥಾನದಲ್ಲಿ ಯಾವುದೇ ಸಾರ್ವಜನಿಕ ಕಾರ್ಯಕ್ರಮ ಇರುವುದಿಲ್ಲ ಎಂದು ಆಡಳಿತ ಮಂಡಳಿ ಹೇಳಿದೆ. ವಿಶೇಷ ಭದ್ರತಾ ವ್ಯವಸ್ಥೆ ಇರುವುದರಿಂದ ಭಕ್ತರು ದರ್ಶನಕ್ಕೆ ಬಾರದಂತೆ ಆಡಳಿತ ಮಂಡಳಿ ಮನವಿ ಮಾಡಿದೆ. ಕೊಲ್ಲೂರು ದೇವಸ್ಥಾನ ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ತಮಿಳುನಾಡು ಪೊಲೀಸರೊಂದಿಗೆ ಉಡುಪಿ ಪೊಲೀಸರು ಭದ್ರತೆ ವಹಿಸಿದ್ದಾರೆ.
ಇದನ್ನೂ ಓದಿ : NSQF ಯೋಜನೆ ಸ್ಥಗಿತಗೊಳಿಸಬೇಡಿ : ಮಹಿಳಾ ತರಬೇತುದಾರರ ಉದ್ಯೋಗ ಭದ್ರತೆಗೆ ತಕ್ಷಣ ಸ್ಪಂದಿಸಿದ ನಾಗಲಕ್ಷ್ಮೀ ಚೌಧರಿ!



















