ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು, ಸಿಎಂ ಸಿದ್ದರಾಮಯ್ಯ ಶುಭ ಕೋರಿದ್ದಾರೆ.
ಸಾಮಾಜಿಕ ಜಾಲತಾಣದ ಮೂಲಕ ಹುಟ್ಟು ಹಬ್ಬದ ಶುಭ ಕೋರಿದ ಸಿಎಂ, ನಾಡಿನ ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ಮತ್ತಷ್ಟು ಕಾಲ ತಮಗೆ ಉತ್ತಮ ಆರೋಗ್ಯ ಮತ್ತು ಆಯಸ್ಸನ್ನು ದೇವರು ಕರುಣಿಸಲೆಂದು ಹಾರೈಸುತ್ತೇನೆ ಎಂದು ಶುಭಕೋರಿದ್ದಾರೆ.