ಬೆಂಗಳೂರು: ನೀವು ಉತ್ತರ ಕನ್ನಡ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೆ ಸುವರ್ಣಾವಕಾಶವೊಂದು ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕೇಂದ್ರೀಯ ಸಮುದ್ರ ಮೀನುಗಾರಿಕಾ ಸಂಸ್ಥೆಯಲ್ಲಿ (CMFRI Recruitment 2026) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಯಂಗ್ ಪ್ರೊಫೇಷನಲ್-I ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕೇಂದ್ರೀಯ ಸಮುದ್ರ ಮೀನುಗಾರಿಕಾ ಸಂಸ್ಥೆ (CMFRI)
ಒಟ್ಟು ಹುದ್ದೆ: 01
ಅರ್ಜಿ ಸಲ್ಲಿಕೆ ಮಾದರಿ: ಇ-ಮೇಲ್
ಉದ್ಯೋಗ ಸ್ಥಳ: ಉತ್ತರ ಕನ್ನಡ
ಹುದ್ದೆಗಳ ಹೆಸರು: ಯಂಗ್ ಪ್ರೊಫೇಷನಲ್-I
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 26
ನೇಮಕಾತಿ ಹೊಂದಿದವರಿಗೆ 30 ಸಾವಿರ ರೂ. ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 45 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ cmfri.org.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಬೇಕು. ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ದಿನಾಂಕದೊಳಗೆ sickrc2018@gmail.com ಇ-ಮೇಲ್ ವಿಳಾಸಕ್ಕೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.


















