ಬೆಂಗಳೂರು : ವಿಧಾನಸೌಧದ ಸಿಎಂ ಕಚೇರಿಯಲ್ಲಿ ಸಚಿವರು, ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸುತ್ತಿದ್ದಾರೆ.
ಇಂದು ಇಡೀ ದಿನ ಸಭೆಯನ್ನು ನಡೆಸಲಿದ್ದಾರೆ ಎನ್ನಲಾಗುತ್ತಿದೆ. 10 ಜಿಲ್ಲೆಗಳ ಉಸ್ತುವಾರಿ ಸಚಿವರು ಮತ್ತು ಶಾಸಕರ ಜೊತೆ ಸಭೆ ನಡೆಸಲಾಗುತ್ತಿದೆ.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಚಿವರು, ಶಾಸಕರ ಜೊತೆ ಸಭೆ ನಡೆಸಲಾಗುತ್ತಿದೆ.
ನಿನ್ನೆ ಐದು ಜಿಲ್ಲೆಗಳ ಸಚಿವರು ಮತ್ತು ಶಾಸಕರ ಜೊತೆ ಸಭೆ ನಡೆಸಲಾಗಿತ್ತು. ಸಂಜೆ ಬೆಳಗಾವಿ, ಹುಬ್ಬಳ್ಳಿ – ಧಾರವಾಡ, ಉತ್ತರ ಕನ್ನಡ ಜಿಲ್ಲೆಗಳ ಸಭೆ ನಡೆಸಲಾಗುತ್ತದೆ. ಇನ್ನು, ಸಭೆಯಲ್ಲಿ ಶಾಸಕರ ಕುಂದುಕೊರತೆ ಸಿಎಂ ಆಲಿಸುತ್ತಿದ್ದು, ಉಸ್ತುವಾರಿ ಸಚಿವರಿಗೆ ಶಾಸಕರ ಮುಂದೆಯೇ ಸಹಕರಿಸುವಂತೆ ಸೂಚನೆ ನೀಡಲಿದ್ದಾರೆ.