ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ ಅವರು ಎರಡು ದಿನಗಳ ಕಾಲ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ (ಏಪ್ರಿಲ್ 12) ಅವರು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿಗೆ ಆಗಮಿಸಲಿದ್ದಾರೆ. ಇದೇ ದಿನ ಸಂಜೆ ಅವರು ಎನ್.ಆರ್.ಪುರದಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಏಪ್ರಿಲ್ 13ರಂದು ಭದ್ರಾ ಹಿನ್ನೀರಿನಲ್ಲಿ ನಿರ್ಮಾಣಗೊಂಡಿರುವ ಹಂದೂರು ಸೇತುವೆಯನ್ನು ಸಿಎಂ ಉದ್ಘಾಟಿಸಲಿದ್ದಾರೆ. ಈ ಸೇತುವೆ ಹಂದೂರು ಮತ್ತು ಎನ್.ಆರ್.ಪುರವನ್ನು ಸಂಪರ್ಕಿಸುವ ಮಹತ್ವದ ಯೋಜನೆಯಾಗಿದ್ದು, ಸುಮಾರು 34 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.
ಇದರ ಜೊತೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿಯೂ ಸಿಎಂ ಭಾಗವಹಿಸಲಿದ್ದಾರೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಎನ್.ಆರ್.ಪುರ ತಾಲೂಕಿನಲ್ಲಿ ನಡೆಯುವ ಈ ಕಾರ್ಯಕ್ರಮಗಳಿಗೆ ಸ್ಥಳೀಯರು ಮತ್ತು ಅಧಿಕಾರಿಗಳು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
ಇದನ್ನೂ ಓದಿ : ಅರಣ್ಯ ಒತ್ತುವರಿ ಕೇಸ್ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಭಾರೀ ಹಿನ್ನಡೆ!



















