ಹಾಸನ : ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು ಇಂದು ಹಾಸನಾಂಬ ದೇವಿಯ ದರ್ಶನ ಪಡೆದಿದ್ದಾರೆ. ಇದೇ ಮೊದಲ ಬಾರಿಗೆ ಪಾರ್ವತಿ ಸಿದ್ದರಾಮಯ್ಯ ಹಾಸನಾಂಬೆ ದೇವಿಯ ದರ್ಶನಕ್ಕೆ ಆಗಮಿಸಿದ್ದು, ತಾಯಿಯ ಆಶೀರ್ವಾದ ಪಡೆದು ತೆರಳಿದ್ದಾರೆ.

ಪಾರ್ವತಿ ಸಿದ್ದರಾಮಯ್ಯ ಶಿಷ್ಟಾಚಾರ ವಾಹನದಲ್ಲಿ ದೇವಸ್ಥಾನಕ್ಕೆ ಆಗಮಿಸಿದ್ದು, ಹಾಸನಾಂಬೆ ದರ್ಶನಕ್ಕೆ ಪಾರ್ವತಿ ಸಿದ್ದರಾಮಯ್ಯನವರು ಅಸಗಮಿಸಿದ್ದನ್ನ ಚಿತ್ರೀಕರಣ ಮಾಡಲು ಬೆಂಗಾವಲು ಪಡೆ ಸಿಬ್ಬಂದಿ ಅವಕಾಶ ನೀಡಲಿಲ್ಲ. ಪೊಲೀಸರು ಪಾರ್ವತಿ ಸಿದ್ದರಾಮಯ್ಯ ಅವರನ್ನು ಬಿಗಿ ಭದ್ರತೆಯಲ್ಲಿ ಕರೆತಂದು ಪೂಜೆ ಸಲ್ಲಿಸಿ ಕರೆದುಕೊಂಡು ಹೋಗಿದ್ದಾರೆ.