ಬೆಂಗಳೂರು: ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಕೆಲಸ ಮಾಡಬೇಕು, ಸರ್ಕಾರಿ ಉದ್ಯೋಗ ಪಡೆದು ಜೀವನದಲ್ಲಿ ಸೆಟಲ್ ಆಗಬೇಕು ಎನ್ನುವವರಿಗೆ ಸಿಹಿ ಸುದ್ದಿ ದೊರೆತಿದೆ. ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ 170 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಜುಲೈ 27 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಇದಕ್ಕೂ ಮೊದಲು ಜುಲೈ 23 ಕೊನೆಯ ದಿನವಾಗಿತ್ತು. ಈಗ ದಿನಾಂಕವನ್ನು ವಿಸ್ತರಣೆ ಮಾಡಿದ ಕಾರಣ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಹೆಚ್ಚು ಅವಧಿ ಸಿಕ್ಕಂತಾಗಿದೆ.
ಸಹಾಯಕ ಕಮಾಂಡೆಂಟ್ (ಜನರಲ್ ಡ್ಯೂಟಿ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ದೇಶದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಾನ್ಯತೆ ಪಡೆದ ಮಂಡಳಿಗಳಿಂದ ಪಿಯುಸಿ ಕೋರ್ಸ್ ಮುಗಿಸಿರಬೇಕು. ಸಹಾಯಕ ಕಮಾಂಡೆಂಟ್ (ತಂತ್ರಜ್ಞಾನ-ಎಂಜಿನಿಯರಿಂಗ್) ವಿಭಾಗದಲ್ಲಿ ಅರ್ಜಿ ಸಲ್ಲಿಸುವವರು ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಕೋಸ್ಟ್ ಗಾರ್ಡ್
ಸಹಾಯಕ ಕಮಾಂಡೆಂಟ್ (ಜನರಲ್ ಡ್ಯೂಟಿ) : 140 ಹುದ್ದೆ
ಸಹಾಯಕ ಕಮಾಂಡೆಂಟ್ (ತಂತ್ರಜ್ಞಾನ-ಎಂಜಿನಿಯರಿಂಗ್) : 30 ಹುದ್ದೆ
ಸಂಬಳ: 56,100-2.05 ಲಕ್ಷ ರೂ.
21ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಬಿಸಿ ಸಮುದಾಯದವರಿಗೆ ಮೂರು ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ ಐದು ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿಯವರಿಗೆ ಅರ್ಜಿ ಶುಲ್ಕವಿಲ್ಲ. ಉಳಿದ ಎಲ್ಲ ಸಮುದಾಯಗಳ ಅಭ್ಯರ್ಥಿಗಳಿಗೆ 300 ರೂಪಾಯಿ ಅರ್ಜಿ ಶುಲ್ಕವಿದೆ. https://joinindiancoastguard.cdac.inಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.