ಅಮೇರಿಕಾದಲ್ಲಿ ಇತ್ತೀಚಿಗೆ ನೆಡೆದ ಯು.ಎಸ್.ಓಪನ್ ಸೂಪರ್ 300 ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಆಯುಷ್ ಶೆಟ್ಟಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಫೈನಲ್ ನಲ್ಲಿ ಕೆನಡಾದ ಬ್ರಿಯಾನ್ ಯಾಂಗ್ ಅವರನ್ನು 21-18,21-13 ಅಂತರದಲ್ಲಿ ಸೋಲಿಸುವುದರ ಮೂಲಕ ಈ ಸಾಧನೆ ಮಾಡಿದ್ದಾರೆ. ಈ ಹಿಂದೆ 2023 ರಲ್ಲಿ ನೆಡೆದ ವಿಶ್ವ ಜೂನಿಯರ್ ಚಾಂಪಿಯನ್ ಶಿಪ್ ಕೂಟದಲ್ಲಿ ಕಂಚನ್ನು ಮೂಡಿಗೇರಿಸಿಕೊಂಡಿದ್ದು, ಸೀನಿಯರ್ ವಿಭಾಗದಲ್ಲಿ ಇದು ಅವರ ಚೊಚ್ಚಲ ಪ್ರಶಸ್ತಿಯಾಗಿರುತ್ತದೆ.