ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ದೇಶದ ಬೃಹತ್ ಹಡಗು ತಯಾರಿಕೆ ಕಂಪನಿಯಾಗಿರುವ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಖಾಲಿ ಇರುವ 308 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಐಟಿಐ ಟ್ರೇಡ್ ಅಪ್ರೆಂಟಿಸ್ ಹಾಗೂ ಟೆಕ್ನಿಶಿಯನ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 15 ಕೊನೆಯ ದಿನವಾಗಿದೆ. ಸರ್ಕಾರಿ ಹುದ್ದೆಗಳನ್ನು ಹುಡುತ್ತಿರುವವರಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್
ಹುದ್ದೆಗಳ ಹೆಸರು: ಅಪ್ರೆಂಟಿಸ್
ಒಟ್ಟು ಹುದ್ದೆಗಳು: 308
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 15
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಐಟಿಐ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 18 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗ ವಯೋಮಿತಿ ಸಡಿಲಿಕೆ ಇದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ಇದೆ. ನೇಮಕಾತಿ ಹೊಂದಿದವರಿಗೆ ತರಬೇತಿ ಅವಧಿಯಲ್ಲಿ ಮಾಸಿಕ 11 ಸಾವಿರ ರೂಪಾಯಿವರೆಗೆ ಸ್ಟೈಪೆಂಡ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು cochinshipyard.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : 7 ವರ್ಷಗಳ ನಂತರ ನಟನೆಗೆ ಮರಳಲಿದ್ದಾರೆಯೇ ಅನುಷ್ಕಾ ಶರ್ಮಾ? ‘ಚಕ್ ದ ಎಕ್ಸ್‌ಪ್ರೆಸ್’ ಬಿಡುಗಡೆ ಸಾಧ್ಯತೆ



















