ಬೆಂಗಳೂರು: ಕೇರಳದ ಕೊಚ್ಚಿಯಲ್ಲಿರುವ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಖಾಲಿ ಇರುವ ಶಿಪ್ ಡ್ರಾಫ್ಟ್ ಮ್ಯಾನ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 35 ಹುದ್ದೆಗಳು ಖಾಲಿ ಇವೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 22 ಕೊನೆಯ ದಿನವಾಗಿದೆ. ಸರ್ಕಾರಿ ಹುದ್ದೆಗಳನ್ನು ಹುಡುತ್ತಿರುವವರಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್
ಹುದ್ದೆಗಳ ಹೆಸರು: ಶಿಪ್ ಡ್ರಾಫ್ಟ್ ಮ್ಯಾನ್ ಟ್ರೈನಿ
ಒಟ್ಟು ಹುದ್ದೆಗಳು: 35
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 22
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
cochinshipyard.com
ಶಿಪ್ ಡ್ರಾಫ್ಟ್ಸ್ ಮ್ಯಾನ್ ಟ್ರೈನಿ (ಮೆಕ್ಯಾನಿಕಲ್), ಶಿಪ್ ಡ್ರಾಫ್ಟ್ಸ್ ಮ್ಯಾನ್ ಟ್ರೈನಿ (ಎಲೆಕ್ಟ್ರಿಕಲ್) ಮತ್ತು ಶಿಪ್ ಡ್ರಾಫ್ಟ್ಸ್ ಮ್ಯಾನ್ ತರಬೇತಿ (ಎಲೆಕ್ಟ್ರಾನಿಕ್ಸ್) ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಇನ್ಸ್ಟ್ರುಮೆಂಟೇಷನ್ ಎಂಜಿನಿಯರಿಂಗ್, ಡಿಪ್ಲೋಮಾದಲ್ಲಿ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಯಾವ ಹುದ್ದೆ ಎಷ್ಟು ಖಾಲಿ?
ಶಿಪ್ ಡ್ರಾಫ್ಟ್ಸ್ ಮ್ಯಾನ್ ಟ್ರೈನಿ (ಮೆಕ್ಯಾನಿಕಲ್) : 20
ಶಿಪ್ ಡ್ರಾಫ್ಟ್ಸ್ ಮ್ಯಾನ್ ಟ್ರೈನಿ (ಎಲೆಕ್ಟ್ರಿಕಲ್) : 13
ಶಿಪ್ ಡ್ರಾಫ್ಟ್ಸ್ ಮ್ಯಾನ್ ತರಬೇತಿ (ಎಲೆಕ್ಟ್ರಾನಿಕ್ಸ್) : 2
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗ ವಯೋಮಿತಿ ಸಡಿಲಿಕೆ ಇದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ ಹೊರತುಪಡಿಸಿ ಉಳಿದ ಎಲ್ಲ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕವಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 20 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು https://cochinshipyard.in/careerdetail/career_locations/710 ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.