ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಕಾಫಿ ಮಂಡಳಿಯಲ್ಲಿ (Coffee Board Recruitment 2026) ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಈ ಕೆಳಗಿನಂತಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಕಾಫಿ ಮಂಡಳಿ
ಒಟ್ಟು ಹುದ್ದೆಗಳು: ವಿವಿಧ
ಅರ್ಜಿ ಸಲ್ಲಿಕೆ ಮಾದರಿ: ಆಫ್ ಲೈನ್
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಹುದ್ದೆಗಳ ಹೆಸರು: ಚೀಫ್ ಎಕ್ಸಿಕ್ಯೂಟಿವ್ ಆಫೀಸರ್
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಬಿಎ, ಪಿಎಚ್.ಡಿ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ವರ್ಷಕ್ಕೆ 20 ಲಕ್ಷ ರೂಪಾಯಿ ಸಂಬಳದ ಪ್ಯಾಕೇಜ್ ದೊರೆಯಲಿದೆ.
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ coffeeboard.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಬೇಕು. ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ದಿನಾಂಕದೊಳಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ಹಾಗೂ ದಾಖಲೆಗಳ ಸಾಫ್ಟ್ ಕಾಪಿಗಳನ್ನು ddadmn.coffeeboard@gmail.com ವಿಳಾಸಕ್ಕೂ ಮೇಲ್ ಮಾಡಬಹುದು.
ಅರ್ಜಿ ಸಲ್ಲಿಸಬೇಕಾದ ವಿಳಾಸ
The Deputy Director, Coffee Board, No.1 Dr. B.R Amdedkar Veedhi Bengaluru – 560001.
ಇದನ್ನೂ ಓದಿ : HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ : ಫ್ರೆಶರ್‌ಗಳಿಗೆ ಗುಡ್ ನ್ಯೂಸ್



















