ದಾವಣಗೆರೆ / ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ಪಿಳ್ಳಂಗಿರಿ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಶಿವಮೊಗ್ಗ ನಗರದ ಪ್ರೇಮ್ ಕುಮಾರ್ (17) ಎಂದು ಗುರುತಿಸಲಾಗಿದೆ. ಪ್ರೇಮ್ ಡಿವಿಎಸ್ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದನು. ಈತ ಸ್ನೇಹಿತರ ಜೊತೆ ಪಿಳ್ಳಂಗಿರಿಯ ದೇವಸ್ಥಾನಕ್ಕೆ ತೆರಳಿದ್ದ. ವಾಪಾಸ್ ಆಗುವಾಗ ಸ್ನೇಹಿತರ ಜೊತೆ ಈಜಲು ನದಿಗೆ ಇಳಿದಿದ್ದ. ಈ ವೇಳೆ ಮುಳುಗಿ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತ ದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ : ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ | ಅಂತರ್ಜಾತಿ ಯುವಕನನ್ನು ಮದುವೆಯಾಗಿದ್ದಕ್ಕೆ ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆ



















