ಮುಂಬೈ : ಉದ್ಯಮಿ ವಿಜಯ್ ಮಲ್ಯ ವಿರುದ್ಧ ದೇಶಭ್ರಷ್ಟ ಆರ್ಥಿಕ ಅಪರಾಧಿ ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ಬಗ್ಗೆ ಬಾಂಬೆ ಹೈಕೋರ್ಟ್ ಮಹತ್ವದ ಹೇಳಿಕೆ ನೀಡಿದೆ. ಅವರು ಭಾರತಕ್ಕೆ ಯಾವಾಗ ಮರಳುತ್ತಾರೆ ಎಂಬುದನ್ನು ವಕೀಲರು ದೃಢಪಡಿಸಿದ ನಂತರವೇ ವಿಚಾರಣೆ ಮುಂದುವರಿಯಲಿದೆ ಎಂದು ಹೇಳಿದೆ.

ಮಲ್ಯ ಪ್ರಸ್ತುತ ಲಂಡನ್‌ನಲ್ಲಿದ್ದಾರೆ ಎಂದು ಅವರ ವಕೀಲ ಅಮಿತ್ ದೇಸಾಯಿ ಹೇಳಿದ್ದು, ಇದಕ್ಕೆ ಮುಖ್ಯ ನ್ಯಾಯಮೂರ್ತಿ, ಅವರು ಇಲ್ಲಿಗೆ ಬರಲಿ, ನಂತರ ನಾವು ನಿಮ್ಮ ಮಾತನ್ನು ಕೇಳುತ್ತೇವೆ. ಅವರು ಯಾವಾಗ ಬರುತ್ತಾರೆ ಎಂಬುದರ ಕುರಿತು ಸೂಚನೆಗಳನ್ನು ತೆಗೆದುಕೊಳ್ಳಿ ಎಂದು ಪ್ರತಿಕ್ರಿಯಿಸಿದ್ದಾರೆ. ಬಳಿಕ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 23ಕ್ಕೆ ಮುಂದೂಡಿದೆ.
ಇದನ್ನೂ ಓದಿ : ಬೆಳಗಾವಿ ಅಧಿವೇಶನ | ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಡಿ.9ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ!



















