ಮೈಸೂರು : ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಾಪ್ ಸಿಂಹ ಅವರು, ಪ್ರದೀಪ್ ಈಶ್ವರ್ ವಿರುದ್ಧ ಅತ್ಯಂತ ಕಟು ಮತ್ತು ಅವಾಚ್ಯ ಪದಗಳನ್ನು ಬಳಸಿ ವ್ಯಂಗ್ಯವಾಡಿದ್ದಾರೆ.
ಶಾಸಕ ಪ್ರದೀಪ್ ಈಶ್ವರ್ ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದ ಪ್ರತಾಪ್ ಸಿಂಹ, ಇನ್ನೊಂದು ಬಾರಿ ತಮ್ಮ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ ಎಂದು ಪ್ರದೀಪ್ ಈಶ್ವರ್‌ಗೆ ಎಚ್ಚರಿಕೆ ನೀಡಿದ್ದಾರೆ.

ಪ್ರದೀಪ್ ಈಶ್ವರ್ ಅವರ ಬಾಹ್ಯ ರೂಪದ ಬಗ್ಗೆಯೂ ಪ್ರತಾಪ್ ಸಿಂಹ ವೈಯಕ್ತಿಕ ಟೀಕೆಗಳನ್ನು ಮಾಡಿದ್ದು, “ಪ್ರದೀಪ್ ಈಶ್ವರ್ ಕತ್ತಲಲ್ಲಿ ಕಾಣಲ್ಲ, ಬೆಳಕಲ್ಲಿ ಹೊಳೆಯಲ್ಲ. ಮುಳ್ಳಂದಿ ಮುಖದ ಕರ್ನಾಟಕದ ಏಕೈಕ ಕಾಮಿಡಿ ಪೀಸ್ ಪ್ರದೀಪ್ ಈಶ್ವರ್. ಮುಳ್ಳು ಹಂದಿ ಮುಖದ ಕಾಮಿಡಿ ಪೀಸ್ ಹುಟ್ಟೋದು ನಿಮ್ಮ ಅಪ್ಪನಿಗೆ ಮಾತ್ರ. ನನ್ನ ತಂದೆ ವಯಸ್ಸಿನಲ್ಲಿದ್ದಾಗ ಚಿಕ್ಕಬಳ್ಳಾಪುರ ಕಡೆ ಬಂದಿದ್ದರೆ ನೀನು ಸುಂದರವಾಗಿಯೇ ಹುಟ್ಟುತ್ತಿದ್ದೆ. ಎಚ್ಚರಿಕೆ ಇರಬೇಕು ಮಗನೇ ನನ್ನ ಬಗ್ಗೆ ಮಾತಾಡುವಾಗ” ಎಂದು ತಾಪ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರದೀಪ್ ಈಶ್ವರ್‌ಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಬೇಕಾದ ಅನಿವಾರ್ಯತೆ ಬಂದಿದೆ ಎಂದು ಹೇಳಿದ ಪ್ರತಾಪ್ ಸಿಂಹ, ಈ ರೀತಿ ಕಠಿಣ ಪದಗಳನ್ನು ಬಳಸಿದ್ದಕ್ಕಾಗಿ ಕರ್ನಾಟಕದ ಜನರ ಬಳಿ ಕ್ಷಮೆ ಕೇಳುತ್ತೇನೆ. ನನ್ನ ತಾಯಿ ಬಗ್ಗೆ ಪ್ರದೀಪ್ ಈಶ್ವರ್ ಅವಹೇಳನವಾಗಿ ಮಾತಾಡಿದ್ದಾನೆ. ಇನ್ನೊಂದು ಬಾರಿ ಎಚ್ಚರಿಕೆ ಇರಲಿ. ರಾಜಕೀಯವಾಗಿ, ಚಿಕ್ಕಬಳ್ಳಾಪುರದ ಗೌಡರ ಸಣ್ಣ ಮುನಿಸಿನ ಕಾರಣದಿಂದಾಗಿ ಪ್ರದೀಪ್ ಈಶ್ವರ್ ಗೆದ್ದಿದ್ದಾರೆ ಅಷ್ಟೇ ಎಂದು ಗೆಲುವಿನ ಬಗ್ಗೆಯೂ ಪ್ರತಾಪ್ ಸಿಂಹ ಟೀಕಿಸಿದ್ದಾರೆ.



















