ಬೆಂಗಳೂರು : ಸ್ಯಾಂಡಲ್‌ವುಡ್ ನಟಿ ರಮ್ಯಾಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡಿದ್ದ ನಟ ದರ್ಶನ್ ಫ್ಯಾನ್ಸ್ ವಿರುದ್ಧ ಸಿಸಿಬಿ ಸೈಬರ್ ಪೊಲೀಸರು ಕೋರ್ಟ್ಗೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.
ಈ ಕೇಸಲ್ಲಿ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಕಾರ್ಯಾಚರಣೆ ನಡೆಸಿ 11 ಮಂದಿ ದರ್ಶನ್ ಅಭಿಮಾನಿಗಳನ್ನು ಬಂಧಿಸಲಾಗಿತ್ತು. ಇದೀಗ ಬಂಧಿತ ಆರೋಪಿಗಳ ತನಿಖೆ ಪೂರ್ಣಗೊಳಿಸಿ ಸಿಸಿಬಿ ಸೈಬರ್ ಪೊಲೀಸರು 380 ಪುಟಗಳ ಸುದೀರ್ಘ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಆರೋಪಿಗಳ ಮೊಬೈಲ್, ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಹಾಕಿದ ಸ್ಕ್ರೀನ್ ಶಾಟ್ಸ್, ದೂರುದಾರೆ ರಮ್ಯಾ ಸ್ಟೇಟ್ ಮೆಂಟ್, FSL ವರದಿ, ಆರೋಪಿಗಳ ಸ್ವ ಇಚ್ಚಾ ಹೇಳಿಕೆ ಆಧಾರದಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಅಶ್ಲೀಲ ಕಮೆಂಟ್ ಹಾಕಿದ 6 ಆರೋಪಿಗಳು ಇನ್ನೂ ಪೊಲೀಸರ ಕೈಗೆ ಸಿಕ್ಕಿಲ್ಲ. ಈ 6 ಆರೋಪಿಗಳು ಸಿಕ್ಕ ಬಳಿಕ ಸಿಸಿಬಿ ಸೈಬರ್ ಪೊಲೀಸರು ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ.