ಬೆಂಗಳೂರು: ಮತಗಳ್ಳತನದ ಆರೋಪ ಮಾಡಿರುವ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಆಯೋಗ ನೋಟಿಸ್ ನೀಡಿದೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹಾದೇವಪುರ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದು, ಈಗ ಆಯೋಗ ನೋಟಿಸ್ ನೀಡಿದೆ. ಸುದ್ದಿಗೋಷ್ಠಿಯಲ್ಲಿ ನೀವು ಚುನಾವಣಾ ಆಯೋಗದ ದಾಖಲೆಗಳಿಂದ ಬಂದಿವೆ ಎಂದು ಹೇಳಿದ್ದೀರಿ. ಇದು ಚುನಾವಣಾ ಆಯೋಗದ ಡೇಟಾನಾ? ಆಯೋಗ ಪ್ರಶ್ನೆ ಮಾಡಿದೆ.
ಶಕುನ್ ರಾಣಿ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ನೀವು ಹೇಳಿದ್ದೀರಿ. ‘ಈಸ್ ಐಡಿ ಕಾರ್ಡ್ ಪರ್ ದೋ ಬಾರ್ ವೋಟ್ ಲಗಾಹೈ, ವೋ ಜೋ ಟಿಕ್ ಹೈ, ಪೋಲಿಂಗ್ ಬೂತ್ ಕೆ ಆಫೀಸರ್ ಕಿಹೈ’ ಎಂದು ಹೇಳಿದ್ದೀರಿ. ಆದರೆ, ಶಕುನ್ ರಾಣಿ ಅವರು ನೀವು ಆರೋಪಿಸಿದಂತೆ ಎರಡು ಬಾರಿ ಅಲ್ಲ, ಒಮ್ಮೆ ಮಾತ್ರ ಮತ ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ಉತ್ತರಿಸಿದೆ.



















