ಬೆಂಗಳೂರು: ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡುವವರು, ಅದರಲ್ಲೂ ಬೆಂಗಳೂರಿನಲ್ಲಿ ವೃತ್ತಿಜೀವನ ಕಂಡುಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ರಾಜ್ಯ ಸರ್ಕಾರದ ಕಮಿಷನರ್ ಡಿಪಾರ್ಟ್ ಮೆಂಟ್ ಆಫ್ ಟ್ರೆಶರೀಸ್ ಸಂಸ್ಥೆಯಲ್ಲಿ ಖಾಲಿ ಇರುವ 4 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕಮಿಷನರ್ ಡಿಪಾರ್ಟ್ ಮೆಂಟ್ ಆಫ್ ಟ್ರೆಶರೀಸ್
ಒಟ್ಟು ಹುದ್ದೆ: 04
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 10
ಸೊಲ್ಯೂಷನ್ ಆರ್ಕಿಟೆಕ್ಟ್, ಬಿಸಿನೆಸ್ ಪ್ರೊಸೆಸ್ ರೆಎಂಜಿನಿಯರಿಂಗ್ ಎಕ್ಸ್ ಪರ್ಟ್, ಡೊಮೇನ್ ಎಕ್ಸ್ ಪರ್ಟ್, ಪ್ರಾಜೆಕ್ಟ್ ಮ್ಯಾನೇಜರ್ ವಿಭಾಗದಲ್ಲಿ ತಲಾ ಒಂದು ಹುದ್ದೆ ಖಾಲಿ ಇದೆ. ಬಿ.ಇ, ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು khajane.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ಡೌನ್ ಲೋಡ್ ಮಾಡಿಕೊಂಡ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು. ಇಲ್ಲದಿದ್ದರೆ Email: commr.pa@karnataka.gov.in ಇಮೇಲ್ ವಿಳಾಸಕ್ಕೂ ಅರ್ಜಿಯನ್ನು ಕಳುಹಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ
The Office of The Commissioner of Treasuries, 6th Floor, KPCL Green Building Palace Road, Bengaluru-560001. Application May Also Send Through



















