ಶಿವಮೊಗ್ಗ: ಮೊಬೈಲ್ (Mobile) ಹೆಚ್ಚು ನೋಡಬೇಡ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಾಲಕರು ಬುದ್ಧಿ ಹೇಳಿದ್ದಕ್ಕೆ ವಿಷ ಸೇವಿಸಿದ್ದ ಧನುಶ್ರೀ(20) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜಿನಲ್ಲಿ ಓದುತಿದ್ದ ಧನುಶ್ರೀ ಮೊಬೈಲ್ ನಲ್ಲೇ ಹೆಚ್ಚು ಸಮಯ ಕಳೆಯುತ್ತಿದ್ದರು. ಈ ಹಿನ್ನೆಲೆಯಲ್ಲಿ ಪೋಷಕರು ಹೆಚ್ಚು ಮೊಬೈಲ್ ನೋಡಬೇಡ. ಅಭ್ಯಾಸ ಮಾಡು ಎಂದು ಬುದ್ಧಿ ಹೇಳಿದ್ದಾರೆ. ಇಷ್ಟಕ್ಕೆ ಕೋಪಗೊಂಡ ಧನುಶ್ರೀ ಮೂರು ದಿನದ ಹಿಂದೆ ವಿಷ ಸೇವಿಸಿದ್ದಾಳೆ. ಕೂಡಲೇ ಧನುಶ್ರೀಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾಪನ್ನಪ್ಪಿದ್ದಾಳೆ.