ಬೆಂಗಳೂರು: ಜೆಡಿಎಸ್ ಪಕ್ಷದ ಸಾಮಾಜಿಕ ಜಾಲತಾಣ ನಿರ್ವಹಣಾ ಸಿಬ್ಬಂದಿ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಸಿಬ್ಬಂದಿಯು ಎಐಸಿಸಿಯ ಅಧಿಕೃತ ಲೆಟರ್ ಹೆಡ್ ನಕಲು ಮಾಡಿ, ಡಿಸಿಎಂ ಡಿ.ಕೆ. ಶಿವಕುಮಾರ್ ರನ್ನು ಪಕ್ಷದಿಂದ ಹೊರ ಹಾಕಲಾಗಿದೆ ಎಂದು ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆಗಳಿಂದ ಹೊರಹಾಕಿರುವುದಾಗಿ ಲೆಟರ್ ಹೆಡ್ ಮೂಲಕ ಪೋಸ್ಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಠಾಣೆಗೆ ವಕೀಲ ಧನಂಜಯ್ ದೂರು ನೀಡಿದ್ದಾರೆ. ಡಿಸಿಎಂ ಡಿಕೆಶಿವಕುಮಾರ್ ಮಾನಕ್ಕೆ ಧಕ್ಕೆಯಾಗುವಂತೆ ಟ್ವಿಟರ್ ನಲ್ಲಿ ಸುಳ್ಳು ಸುದ್ದಿ ಹಾಕಿದ್ದಾರೆ. ಈ ಮೂಲಕ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟಾಗಿದೆ. ಕೂಡಲೇ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.



















