ಬೆಂಗಳೂರು : ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಟನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮನೋಜ್ ಎಂಬವರು ದೂರಿನಲ್ಲಿ ಆಗ್ರಹಿಸಿದ್ದಾರೆ. ಆದ್ರೆ ಬನಶಂಕರಿ ಠಾಣೆಯ ಪೊಲೀಸರು ಕೇವಲ ಎನ್‌ಸಿಆರ್ ದಾಖಲು ಮಾಡಿಕೊಂಡಿದ್ದಾರೆ.

ನಟ ಧ್ರುವ ಸರ್ಜಾ ಅವರ ಅಭಿಮಾನಿಗಳಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆಯಾಗುತ್ತಿದೆ ಎಂದು ಮನೋಜ್ ಆರೋಪಿಸಿದ್ದಾರೆ. ಈ ಸಂಬಂಧ ನಟ ಧ್ರುವ ಸರ್ಜಾ, ಅವರ ಮ್ಯಾನೇಜರ್ ಮತ್ತು ಅಭಿಮಾನಿಗಳ ವಿರುದ್ಧ ದೂರು ದಾಖಲಿಸಲಾಗಿದೆ.
ನಟನ ಅಭಿಮಾನಿಗಳು ಪ್ರತಿನಿತ್ಯ ಬೈಕ್ ಗಳನ್ನ ಅಡ್ಡಲಾಗಿ ಪಾರ್ಕ್ ಮಾಡುತ್ತಾರೆ. ಪ್ರತಿನಿತ್ಯ ಮನೆಯ ಮುಂದೆ ಧೂಮಪಾನ ಮಾಡುತ್ತಾರೆ. ಮನೆಯ ಗೋಡೆಗಳ ಮೇಲೆಯೇ ಉಗಿಯುತ್ತಾರೆ. ಇದ್ದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆಯಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ : ಬೀದರ್ | RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ನೋಟಿಸ್!


















