ಬೆಂಗಳೂರು: ಕೈ ಕಾರ್ಯಕರ್ತೆ ಮೇಲೆ ಕಾಂಗ್ರೆಸ್ ನಾಯಕ ಎಚ್.ಎಂ. ರೇವಣ್ಣ ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂರು ಸಲ್ಲಿಕೆಯಾಗಿದೆ.
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಹೆಚ್.ಎಂ.ರೇವಣ್ಣ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ದೂರು ಸಲ್ಲಿಸಿದ್ದಾರೆ. ಈ ಕುರಿತು ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಲ್ಲದೇ, ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರಿಗೂ ದೂರು ಸಲ್ಲಿಕೆಯಾಗಿದೆ. ಅಲ್ಲದೇ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಗೆ ದೂರು ಸಲ್ಲಿಕೆಯಾಗಿದೆ. ಮೇಲ್ ಮೂಲಕ ದೂರು ನೀಡಿದ್ದಾರೆ.