ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯ್ತು ಎಂದು ವಿವಾದದ ಕಿಡಿ ಹೊತ್ತಿಸಿದ್ದ ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲಾಗಿದೆ.
ಗಾಯಕ ಸೋನು ನಿಗಮ್ ವಿರುದ್ಧ ಕನ್ನಡ ರಕ್ಷಣಾ ವೇದಿಕೆಯು ಆವಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದೆ. ಸೋನು ನಿಗಮ್ ಅವರು ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದು ಕನ್ನಡ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಪಹಲ್ಗಾಮ್ ದಾಳಿಯನ್ನು ಕನ್ನಡದೊಂದಿಗೆ ಜೋಡಿಸಿ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಕನ್ನಡ ಚಿತ್ರರಂಗ ಹಾಗೂ ಸಂಘಟನೆಗಳಿಂದ ಸೋನು ನಿಗಮ್ ಹೇಳಿಕೆ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.



















