ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಹಾಗೂ ವಕೀಲ ದೇವರಾಜೇಗೌಡ (Devarajegowda) ವಿರುದ್ಧ ಕಾಂಗ್ರೆಸ್ ನಿಂದ ಎಸ್ ಐಟಿಗೆ ದೂರು ದಾಖಲಾಗಿದೆ.
ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಪ್ರಕಾಶ್ (Prakash) ಈ ಕುರಿತು ಮಾಹಿತಿ ನೀಡಿದ್ದಾರೆ. ದೇವರಾಜೇಗೌಡ ಹಾಗೂ ಕುಮಾರಸ್ವಾಮಿ ಎಸ್‌ಐಟಿ ವಿರುದ್ಧ ಹೇಳಿಕೆ ನೀಡುವ ಮೂಲಕ ತನಿಖೆಯ ದಾರಿ ತಪ್ಪಿಸುತ್ತಿದ್ದಾರೆ. ಈ ಮೂಲಕ ಪರೋಕ್ಷವಾಗಿ ಆರೋಪಿಗಳ ರಕ್ಷಣೆಗೆ ನಿಂತಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಜ್ವಲ್ ರೇವಣ್ಣ ಅತ್ಯಾಚಾರದ ಬಗ್ಗೆ ತಿಳಿದಿದ್ದರೂ ಕುಮಾರಸ್ವಾಮಿ ಯಾವುದೇ ಕ್ರಮ ಕೈಗೊಂಡಿಲ್ಲ. ಸಂತ್ರಸ್ತೆಯರು ಗೆಸ್ಟ್ ಹೌಸ್ ನಲ್ಲಿ ಇದ್ದಾರೆಂದು ಹೇಳಿಕೆ ಕೊಡುವ ಮೂಲಕ ಸಂತ್ರಸ್ತೆ ಬಗ್ಗೆ ಮಾಹಿತಿ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.