ದಾವಣಗೆರೆ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಸರ್ಕಾರಿ ಶಾಲೆಯೊಂದು ಜಲಾವೃತಗೊಂಡಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಯಲೋದಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದೆ.
ಶಾಲೆಯ ಆವರಣದಲ್ಲಿ ಮೊಣಕಾಲುದ್ದ ನೀರು ನಿಂತಿದ್ದು, ಶಾಲೆಗೆ ಬಂದಿದ್ದ ವಿದ್ಯಾರ್ಥಿಗಳು ಮರಳಿ ಮನೆಗೆ ತೆರಳಿದ್ದಾರೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಶಾಲೆಯ ಕಾಂಪೌಂಡ್ ಸಹ ಕುಸಿದು ಬಿದ್ದಿದೆ. ಸದ್ಯ ಶಾಲೆಗೆ ನೀರು ನುಗ್ಗದಂತೆ ಶಾಶ್ವತ ವ್ಯವಸ್ಥೆ ಮಾಡುವಂತೆ ವಿದ್ಯಾರ್ಥಿಗಳು, ಪೋಷಕರು ಸಂಬಂಧಪಟ್ಟವರನ್ನು ಆಗ್ರಹಿಸಿದ್ದಾರೆ.