ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಸಂಸ್ಥೆಯಾದ ಕಾನ್ಫಿಡೆಂಟ್ ಗ್ರೂಪ್‌ನ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಲ್ಯಾಂಗ್‌ಫರ್ಡ್ ರಸ್ತೆಯಲ್ಲಿರುವ ತಮ್ಮ ಬಂಗ್ಲೋದಲ್ಲಿ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇಂದು ಕೂಡ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಪದೇಪದೇ ಐಟಿ ದಾಳಿಗಳಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂಬುದು ಪ್ರಾಥಮಿಕವಾಗಿ ಕೇಳಿಬರುತ್ತಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ದೃಢಪಡಬೇಕಿದೆ.
ಮಾಹಿತಿ ತಿಳಿದ ತಕ್ಷಣ ಅಶೋಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ಆರಂಭವಾಗಿದ್ದು, ಎಲ್ಲಾ ಆಯಾಮಗಳಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಘಟನೆಯಿಂದ ಉದ್ಯಮ ವಲಯದಲ್ಲಿ ತೀವ್ರ ಶೋಕ ವ್ಯಕ್ತವಾಗಿದೆ.
ಇದನ್ನೂ ಓದಿ : ಕೊಪ್ಪಳ | ಲಾರಿ ಹರಿದು 12 ಕ್ಕೂ ಹೆಚ್ಚು ಕುರಿಗಳು ಸಾವು


















