ಧರ್ಮಸ್ಥಳ /ನೆಲಮಂಗಲ : ಸೌಜನ್ಯಾ ಕೊಲೆ ಮತ್ತು ಅತ್ಯಾಚಾರ ವಿಚಾರ ಮತ್ತು ಅಸಹಜ ಸಾವಿಗೀಡಾದ ನೂರಾರು ಶವಗಳನ್ನು ಧರ್ಮಸ್ಥಳದ ಆಸುಪಾಸಿನಲ್ಲಿ ಹೂತು ಹಾಕಲಾಗಿದೆ ಎಂದು ಆರೋಪಿಸಿ ಶ್ರೀ ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಕಾಂಗ್ರೆಸ್ ವತಿಯಿಂದ ಧರ್ಮಸ್ಥಳಕ್ಕೆ ಯಾತ್ರೆ ಕೈಗೊಳ್ಳಲಾಗಿದೆ ಎಂದು ಶಾಸಕ ಎನ್.ಶ್ರೀನಿವಾಸ್ ಹೇಳಿದ್ದಾರೆ.
ವೀರೇಂದ್ರ ಹೆಗ್ಗಡೆ ಅವರಿಗೆ ನೈತಿಕ ಸ್ಟೈರ್ಯ ತುಂಬುವ ಉದ್ದೇಶದಿಂದ 150ಕ್ಕೂ ಹೆಚ್ಚು ಕಾರುಗಳಲ್ಲಿ ಯಾತ್ರೆ ಕೈಗೊಳ್ಳಲಾಗಿದೆ. ತನಿಖೆ ನಡೆಸಿ ಅಪರಾಧಿಗಳಿಗೆ ಶಿಕ್ಷೆ ವಿಧಿಸಬಹುದು. ಅದರ ಬದಲಾಗಿ ಧಾರ್ಮಿಕ ಕ್ಷೇತ್ರ ಹಾಗೂ ಜನರ ಧಾರ್ಮಿಕ ಭಾವನೆಗೆ ಧಕ್ಕೆ ತರಲು ಅಪಪ್ರಚಾರ ನಡೆಸುತ್ತಿರುವುದು ಸರಿಯಲ್ಲ ಎಂದಿದ್ದಾರೆ.
ಯಾತ್ರೆಯಲ್ಲಿ ಪಾಲ್ಗೊಳ್ಳುವವರು ಕೆಡಿಪಿ ಸದಸ್ಯ ನಾರಾಯಣಗೌಡ (ಮೊಬೈಲ್ ಸಂಖ್ಯೆ 9886605343) ಹಾಗೂ ಯುವ ಮುಖಂಡ ಕಾಚನಹಳ್ಳಿ ಮನು (ಮೊಬೈಲ್ ಸಂಖ್ಯೆ 8105027095) ಅವರನ್ನು ಸಂಪರ್ಕಿಸಿ, ನೋಂದಣಿ ಮಾಡಿಕೊಳ್ಳುವಂತೆ ಪತ್ರಿಕಾ ಪ್ರಕಟಣೆಯ ಮೂಲಕ ಕೋರಲಾಗಿದೆ.