ಹಾವೇರಿ: ಶಿಗ್ಗಾಂವಿ ಕ್ಷೇತ್ರದಲ್ಲಿ ಸೋಲು ಕಂಡ ಭರತ್ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ.
ಕಾಂಗ್ರೆಸ್ (Congress) ಸರ್ಕಾರ ಹಣದ ಹೊಳೆಯನ್ನೇ ಹರಿಸಿದೆ. ಹೀಗಾಗಿ ನಾನು ಕ್ಷೇತ್ರದಲ್ಲಿ ಸೋಲು ಕಾಣುವಂತಾಯಿತು ಎಂದು ಶಿಗ್ಗಾಂವಿ (Shiggaon) ಪರಾಜಿತ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ (Bharath Bommai) ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮೂರು ಕ್ಷೇತ್ರಗಳಲ್ಲಿ ಹಣದ ಹೊಳೆಯನ್ನೇ ಹರಿಸಿದೆ. ಹೀಗಾಗಿ ಆಡಳಿತಾರೂಢ ಕಾಂಗ್ರೆಸ್ ಗೆದ್ದಿದೆ. ನಾನು ಯಾವತ್ತಿದ್ದರೂ ಶಿಗ್ಗಾಂವಿ ಸವಣೂರು ಕ್ಷೇತ್ರದ ಜನರಿಗೆ ಒಳಿತು ಆಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಕ್ಷೇತ್ರದ ಜನರ ಜೊತೆಗೆ ಎಂದೆಂದಿಗೂ ಇರುತ್ತೇನೆ. ಮುಂದೆಯೂ ನಾನು ಶಿಗ್ಗಾಂವಿಯನ್ನು ಕರ್ಮಭೂಮಿಯಾಗಿ ಮಾಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಈ ವೇಳೆ ಮತದಾರರಿಗೆ ಧನ್ಯವಾದ ಅರ್ಪಿಸಿದ ಅವರು, ನಮ್ಮ ಸೋಲಿಗೆ ಕಾರಣ ಏನೆಂಬುವುದನ್ನು ಪಕ್ಷದ ಹಿರಿಯರು ಹಾಗೂ ಯುವಕರೆಲ್ಲ ಸೇರಿ ಅವಲೋಕನ ಮಾಡುತ್ತೇವೆ ಎಂದಿದ್ದಾರೆ.