ಅಂಬೇಡ್ಕರ್ ವಿಚಾರದಲ್ಲಿ ಹಗುರವಾಗಿ ಮಾತನಾಡಿದ್ದಾರೆಂದು ಅಮಿತ್ ಶಾ ವಿರುದ್ಧ ವಿಪಕ್ಷಗಳು ಮುಗಿ ಬಿದ್ದಿವೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅಂಬೇಡ್ಕರ್ ಅವರ ಪರಂಪರೆಯನ್ನು ಅಳಿಸಿಹಾಕಲು ಮತ್ತು ಎಸ್ಸಿ, ಎಸ್‌ಟಿ ಸಮುದಾಯಗಳನ್ನು ಅವಮಾನಿಸಲು ಕಾಂಗ್ರೆಸ್ ಹೇಗೆ ಕುತಂತ್ರಗಳನ್ನು ಮಾಡಿತ್ತೆಂಬುದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ಎಷ್ಟೇ ಪ್ರಯತ್ನಿಸಿದರೂ ಎಸ್ಸಿ, ಎಸ್ಟಿ ಸಮುದಾಯಗಳ ವಿರುದ್ಧ ಅತ್ಯಂತ ಭೀಕರ ಹತ್ಯಾಕಾಂಡಗಳು ತಮ್ಮ ಆಡಳಿತದ ಅವಧಿಯಲ್ಲಿ ನಡೆದಿರುವುದನ್ನು ಅಲ್ಲಗಳೆಯಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ವರ್ಷಗಳ ಕಾಲ ಅಧಿಕಾರದಲ್ಲಿದ್ದರೂ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳನ್ನು ಬಲಪಡಿಸಲು ಏನನ್ನೂ ಮಾಡಲಿಲ್ಲ. ಸಂಸತ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಜಿ ಅವರು ಡಾ. ಅಂಬೇಡ್ಕರ್ ಅವರನ್ನು ಅವಮಾನಿಸಿದ ಮತ್ತು ಎಸ್ಸಿ, ಎಸ್ಟಿ ಕಡೆಗಣಿಸಿದ ಕಾಂಗ್ರೆಸ್‌ನ ಕರಾಳ ಇತಿಹಾಸ ಬಹಿರಂಗಪಡಿಸಿದ್ದಾರೆ. ಅಮಿತ್ ಶಾ ಹೇಳಿರುವ ಸತ್ಯ ನೋಡಿ ಆತಂಕಕ್ಕೊಳಗಾಗಿ ಅಮಿತ್ ಶಾ ವಿರುದ್ಧ ಕತ್ತಿ ಮಸೆಯುತ್ತಿದ್ದಾರೆ ಎಂದರು ಹೇಳಿದರು.
ದ್ರ ಗೃಹ ಸಚಿವ ಅಮಿತ್ ಶಾ ಅವರು ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ದೇಶದ ಕ್ಷಮೆಯಾಚಿಸಬೇಕು ಎಂದು ಗುಡುಗಿದ್ದಾರೆ.