ಕೊಪ್ಪಳ: ಲವ್ ಜಿಹಾದ್ ಆರೋಪದ ಹಿನ್ನೆಲೆ ಮುಸ್ತಫಾ ಖಾದ್ರಿ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಪೊಲೀಸರ ಕ್ರಮಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಹಲವು ಅನುಮಾನಗಳು ವ್ಯಕ್ತವಾಗುತ್ತಿವೆ.

ಆರೋಪಿಯ ವಿರುದ್ಧ ವಿಡಿಯೋ ಹಾಗೂ ಫೋಟೋಗಳಂತಹ ಸಾಕ್ಷ್ಯಗಳಿವೆ ಎಂಬ ಮಾತುಗಳಿದ್ದರೂ, ಇನ್ನೂ ಬಂಧನವಾಗಿಲ್ಲ ಎಂಬ ವಿಚಾರ ಚರ್ಚೆಗೆ ಗ್ರಾಸವಾಗಿದೆ. ರಾಜಾರೋಷವಾಗಿ ಮುಸ್ತಫಾ ಹುಕ್ಕಾ, ಗಾಂಜಾ ಸೇವನೆ ಮಾಡುತ್ತಿರುವ ವಿಡಿಯೋಗಳಿರುವುದಾಗಿ ಆರೋಪಗಳಿದ್ದರೂ, ಪೊಲೀಸರು ನೋಟಿಸ್ ನೀಡಿ ವಿಚಾರಣೆ ಮಾಡ್ತೇವೆ ಅಂತಿದ್ದಾರೆ ಹೊರತು ಬಂಧಿಸುತ್ತಿಲ್ಲ ಇದರಿಂದ ಸಾರ್ವಜನಿಕ ವಲಯದಲ್ಲಿ ಹಲವು ಅನುಮಾನ ಹುಟ್ಟು ಹಾಕುತ್ತಿವೆ.
ದೂರು ದಾಖಲಾಗಿ ಎರಡು ದಿನ ಕಳೆದರೂ ಮುಸ್ತಾಫಾ ಬಂಧನವಾಗದಿರುವುದು ಹಲವರಲ್ಲಿ ಅನುಮಾನ ಹುಟ್ಟಿಸಿದೆ. ಆರೋಪಿಯನ್ನು ಬಂಧಿಸದಂತೆ ಪೊಲೀಸರಿಗೆ ಒತ್ತಡ ಇರುವ ಸಾಧ್ಯತೆಯ ಕುರಿತು ಚರ್ಚೆಗಳು ನಡೆಯುತ್ತಿವೆ.
ಈ ಕುರಿತು ಬಿಜೆಪಿ ಮುಖಂಡ ಬಸವರಾಜ್ ಕ್ಯಾವಟರ್ ಗಂಭೀರ ಆರೋಪ ಮಾಡಿದ್ದು, “ಲವ್ ಜಿಹಾದ್ ಹಿಂದೆ ಕಾಂಗ್ರೆಸ್ ಕೈವಾಡವಿದೆ” ಎಂದು ಹೇಳಿದ್ದಾರೆ. ಸರ್ಕಾರ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಒತ್ತಡಕ್ಕೆ ಪೊಲೀಸರು ಮಣಿದಂತೆ ಕಾಣುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಮುಸ್ತಫಾ ಖಾದ್ರಿ ಮೊಬೈಲ್‌ನಲ್ಲಿ ಸಾವಿರಾರು ವಿಡಿಯೋ ಹಾಗೂ ಫೋಟೋಗಳಿರುವುದಾಗಿ ಹೇಳಲಾಗುತ್ತಿದ್ದು, ಇಷ್ಟೆಲ್ಲಾ ಆರೋಪಗಳಿದ್ದರೂ ಕ್ರಮ ಕೈಗೊಳ್ಳದಿರುವುದು ಸರಿಯಲ್ಲ. ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಸವರಾಜ್ ಕ್ಯಾವಟರ್ ಆಗ್ರಹಿಸಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಎಲ್ಲಾ ಆಯಾಮಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಗರ್ಭಿಣಿ ಹೆಂಡತಿಗೆ ಬೇರೆ ಜಾತಿ ಎಂದು ಕಿರುಕುಳ : ಹೆತ್ತವರ ಮೇಲೆಯೇ ದೂರು ಕೊಟ್ಟ ಮಗ



















