ಹುಬ್ಬಳ್ಳಿ : ಮದ್ದೂರಿನಲ್ಲಿ ಗಣೇಶೋತ್ಸವದ ಮೇಲೆ ಕಲ್ಲೆಸೆದಿರುವುದು ಹೇಯ ಕೃತ್ಯವಾಗಿದೆ. ಈ ಗಲಭೆಗೆ ಕಾಂಗ್ರೆಸ್ ನೇರ ಕಾರಣ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ವರದಿಗಾರರೊಂದಿಗೆ ಮಾತನಾಡಿದ ಪ್ರಮೋದ್ ಮುತಾಲಿಕ್, ಕಳೆದ ವರ್ಷ ನಾಗಮಂಗಲದಲ್ಲಿ ಗಲಭೆಯಾಗಿತ್ತು. ಕಾಂಗ್ರೆಸ್ ನ ಮುಸ್ಲಿಂ ತುಷ್ಟೀಕರಣದಿಂದಾಗಿ ಗಲಭೆ ನಡೆದಿದ್ದು, ಕಾಂಗ್ರೆಸ್ ಸರ್ಕಾರ ಡಿಜೆ ಹಳ್ಳಿ, ಕೆಜೆ ಹಳ್ಳಿ, ಹಳೆ ಹುಬ್ಬಳ್ಳಿ ಪ್ರಕರಣವನ್ನು ವಾಪಸ್ ಪಡೆದಿದೆ. ಅವರ ಕುಮ್ಮಕ್ಕಿನಿಂದ ಇಂತಹ ಘಟನೆಗಳು ನಡೆಯುತ್ತಿದೆ. ಎಂದು ಕಿಡಿಕಾರಿದ್ದಾರೆ.
ಹಿಂದೂ ಸಂಘಟನೆಗಳು ಇನ್ನು ಮುಂದೆ ಇಂತಹ ಘಟನೆಗಳನ್ನು ನೋಡಿಕೊಂಡು ಸುಮ್ಮನೆ ಕೂರುವುದಿಲ್ಲ, ಮುಂದಿನ ದಿನಗಳಲ್ಲಿ ಪ್ರತಿದಾಳಿ ಮಾಡುತ್ತೇವೆ, ಮನೆಗೆ ಹೊಕ್ಕು ಹೊಡೆಯುತ್ತೇವೆ. ಈ ರೀತಿಯ ಮಾನಸಿಕತೆ ನಿಲ್ಲಿಸುವಂತೆ ಆಗ್ರಹಿಸಿ. ಮದ್ದೂರು ಘಟನೆಯಿಂದ ಹಿಂದೂಗಳು ಪಾಠ ಕಲಿಯಬೇಕು ಎಂದು ಹೇಳಿದ್ದಾರೆ.