ನವದೆಹಲಿ: ಲೋಕಸಭೆಯಲ್ಲಿ ಒಂದು ರಾಷ್ಟ್ರ ಒಂದು ಚುನಾವಣಾ ಮಸೂದೆ ಮಂಡನೆಯಾಗಿದ್ದು, ವಯನಾಡ್ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ.
ಸರ್ಕಾರದ ನಿಲುವು ಭಾರತದ ಒಕ್ಕೂಟದ ವಿರೋಧಿಯಾಗಿದೆ. ಸಂವಿಧಾನ ವಿರೋಧಿ ಮಸೂದೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದು ರಾಷ್ಟ್ರದ ಫೆಡರಲಿಸಂ ಗೆ ವಿರುದ್ಧವಾಗಿದೆ. ನಾವು ಈ ಮಸೂದೆಯನ್ನು ವಿರೋಧಿಸುತ್ತೇವೆ ಎಂದು ಹೇಳಿದ್ದಾರೆ. ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಸದನದಲ್ಲಿ ಮಂಡಿಸಿದರು. ಲೋಕಸಭೆಯ ಸ್ಪೀಕರ್ ಸದನದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯನ್ನು ಪರಿಚಯಿಸುವ ಮತದ ಫಲಿತಾಂಶವನ್ನು ಪ್ರಕಟಿಸಿದರು. ಮತವು 269 ಸದಸ್ಯರು ಪರವಾಗಿ ಮತ್ತು 196 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದ್ದರು.