ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಎಲ್ಲ ಪಕ್ಷಗಳು ತಯಾರಿ ನಡೆಸುತ್ತಿವೆ. ಬಿಜೆಪಿಯನ್ನು ಹೇಗಾದರೂ ಮಾಡಿ ಅಲ್ಲಿ ಸೋಲಿಸಬೇಕೆಂದು ಕಾಂಗ್ರೆಸ್ ಹಾಗೂ ಸ್ಥಳೀಯ ಪಕ್ಷವಾಗಿರುವ ನ್ಯಾಷನಲ್ ಕಾನ್ಫರೆನ್ಸ್ ಮುಂದಾಗಿವೆ.
ಬಿಜೆಪಿಯನ್ನು ಮಣಿಸುವುದಕ್ಕಾಗಿ ಒಂದಾಗಿರುವ ಎರಡೂ ಪಕ್ಷಗಳು ಸೀಟು ಹಂಚಿಕೆಯ ಕಾರ್ಯವನ್ನು ಬಗೆಹರಿಸಿಕೊಂಡಿವೆ. ಸೆಪ್ಚೆಂಬರ್ 18ರಂದು ಮೊದಲ ಹಂತದ ಮತದಾನ ನಡೆಯುವ ಜಮ್ಮು ಮತ್ತು ಕಾಶ್ಮೀರದ 24 ಸೀಟುಗಳ ಪೈಕಿ ನ್ಯಾಷನಲ್ ಕಾನ್ಫರೆನ್ಸ್ 13 ಕ್ಷೇತ್ರಗಳನ್ನು, ಕಾಂಗ್ರೆಸ್ 10 ಕ್ಷೇತ್ರಗಳನ್ನು ಹಾಗೂ ಸಿಪಿಎಂ 1 ಕ್ಷೇತ್ರ ಹಂಚಿಕೊಂಡಿವೆ.
ಮೊದಲ ಹಂತದದ ಮತದಾನದಲ್ಲಿ ಕಾಶ್ಮೀರದ 16 ಹಾಗೂ ಜಮ್ಮುವಿನ 8 ಕ್ಷೇತ್ರಗಳಿವೆ. ಎನ್ ಸಿ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಚರ್ಚಿಸಿ ಸೀಟು ಹಂಚಿಕೆ ಅಂತಿಮಗೊಳಿಸಿಕೊಂಡಿದ್ದಾರೆ.
90 ವಿಧಾನಸಭೆ ಕ್ಷೇತ್ರಗಳಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ 10 ವರ್ಷಗಳ ಬಳಿಕ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಹಾಗೂ ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಫಲಿತಾಂಶ ಹೊರ ಬೀಳಲಿದೆ. ಆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಮೈತ್ರಿ ಇಲ್ಲದೆ ಬಿಜೆಪಿ ಮಾತ್ರ ಏಕಾಂಗಿಯಾಗಿ ಸ್ಪರ್ಧೆಗೆ ಧುಮುಕಿದೆ.