ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕ ಸಿ.ಟಿ. ರವಿ ಅಶ್ಲೀಲ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅವರನ್ನು ಅರೆಸ್ಟ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯುತ್ತಿದೆ.
ಈಗಾಗಲೇ ಸಿ.ಟಿ. ರವಿ ಅರೆಸ್ಟ್ ಆಗಿದ್ದು, ಬೆಂಗಳೂರಿನಲ್ಲಿನ ಜನಪ್ರತಿನಿಧಿಗಳ ಕೋರ್ಟ್ ಗೆ ಹಾಜರು ಮಾಡಲು ಕರೆದುಕೊಂಡು ಬರಲಾಗುತ್ತಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಪ್ರತಿಭಟನೆಗಳು ನಡೆಯುತ್ತಿವೆ.
ಸಿ.ಟಿ. ರವಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಅರೆಸ್ಟ್ ಮಾಡಿರುವುದನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಹೀಗಾಗಿ ಎಲ್ಲೆಡೆ ಪ್ರತಿಭಟನೆ ಎನ್ನುವಂತಾಗಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಬಿಜೆಪಿ ಪ್ರತಿಭಟನಾಕಾರರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.