ಬೆಂಗಳೂರು: ಗ್ರೇಟರ್ ಬೆಂಗಳೂರು ಚುನಾವಣೆಗೆ ಕಾಂಗ್ರೆಸ್ ಸರ್ಕಾರ ಈಗಿನಿಂದಲೇ ಭರ್ಜರಿ ತಯಾರಿ ನಡೆಸುತ್ತಿದೆ.
ಮುಂಬರುವ ಗ್ರೇಟರ್ ಬೆಂಗಳೂರು ಚುನಾವಣೆ ಸಂಬಂಧ ಚರ್ಚಿಸಲು ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಎಲ್ಲಾ ಸಚಿವರು ಹಾಗೂ ಶಾಸಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಸಂಜೆ ಕ್ವೀನ್ಸ್ ರಸ್ತೆಯ ಇಂದಿರಾಗಾಂಧಿ ಭವನದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ಮಹತ್ವದ ಮೀಟಿಂಗ್ ನಡೆಯಲಿದೆ.
ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸುರ್ಜೇವಾಲ ಕೆಲ ಸೂಚನೆಗಳನ್ನು ನೀಡಲಿದ್ದಾರೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಮೂವತ್ತಕ್ಕೂ ಹೆಚ್ಚು ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಲಿದ್ದಾರೆ.


















